ಕೊರೋನಾ ಸೋಂಕಿಗೆ ಸಾವಿಗೀಡಾದ ಹಿರಿಯ ನಟ ಹುಲಿವಾನ್ ಗಂಗಾಧರ್

ಬೆಂಗಳೂರು| Krishnaveni K| Last Modified ಶನಿವಾರ, 18 ಜುಲೈ 2020 (09:50 IST)
ಬೆಂಗಳೂರು: ಕನ್ನಡದ ಹಿರಿಯ ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ಪೋಷಕ ಪಾತ್ರ ಮಾಡುತ್ತಿದ್ದ ಹುಲಿವಾನ್ ಗಂಗಾಧರ್ ಕೊರೋನಾ ಸೋಂಕಿಗೆ ಸಾವಿಗೀಡಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
 

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ವೇಳೆ ಅವರಿಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
 
ಹಲವು ಕನ್ನಡ ಧಾರವಾಹಿಗಳಲ್ಲಿ, ಸಿನಿಮಾಗಳಲ್ಲಿ ಅಭಿನಯಿಸಿದ ಗಂಗಾಧರ್ ಹಾಲಿ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪ್ರೇಮಲೋಕ’ ಧಾರವಾಹಿಯಲ್ಲಿ ಪಾತ್ರ ಮಾಡುತ್ತಿದ್ದರು. ಅವರ ಸಾವಿಗೆ ನಟ ಪ್ರೇಮಲೋಕ ನಾಯಕ ವಿಜಯ್ ಸೂರ್ಯ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :