ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ 10 ನೇ ಸೀಸನ್ ಇಂದಿನಿಂದ ಆರಂಭವಾಗಲಿದೆ.ಇಂದು ಸಂಜೆ 6 ಗಂಟೆಯಿಂದ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳನ್ನು ಕಳುಹಿಸಿಕೊಡುವ ಕಾರ್ಯಕ್ರಮ ಆರಂಭವಾಗಲಿದೆ. ಈ ಬಾರಿ ಯಾರೆಲ್ಲಾ ಸ್ಪರ್ಧಿಗಳಾಗಿರಲಿದ್ದಾರೆ ಎಂಬ ಕುತೂಹಲ ವೀಕ್ಷಕರಲ್ಲಿದೆ.ಪ್ರಮುಖವಾಗಿ ಈವರೆಗೆ ಕೇಳಿಬರುತ್ತಿದ್ದ ಹೆಸರುಗಳ ಪೈಕಿ ರಂಜಿನಿ ರಾಘವನ್, ರಾಜೇಶ್ ಧ್ರುವ, ಅದ್ವಿತಿ ಶೆಟ್ಟಿ ತಾವು ಬಿಗ್ ಬಾಸ್ ಗೆ ಹೋಗುತ್ತಿಲ್ಲ