ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡಗೆ ಅಪಘಾತ

ಬೆಂಗಳೂರು| Krishnaveni K| Last Modified ಬುಧವಾರ, 28 ಜುಲೈ 2021 (10:05 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಶೋ ಮೂಲಕ ಜನಪ್ರಿಯತೆ ಗಳಿಸಿದ್ದ ನಟ ಗೋವಿಂದೇಗೌಡ ಅಪಘಾತಕ್ಕೀಡಾಗಿದ್ದು ಆ‍ಸ್ಪತ್ರೆಗೆ ದಾಖಲಾಗಿದ್ದಾರೆ.

 
ಜಿಜಿ ಎಂದೇ ಖ್ಯಾತರಾಗಿದ್ದ ಗೋವಿಂದೇಗೌಡರಿಗೆ ನಿನ್ನೆ ಸಂಜೆ ಅಪಘಾತವಾಗಿದ್ದು, ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ನಟ ಜಗ್ಗೇಶ್ ತಿಳಿಸಿದ್ದಾರೆ.
 
ಇದೀಗ ಆಸ್ಪತ್ರೆಗೆ ಭೇಟಿ ನೀಡಿರುವ ಜಗ್ಗೇಶ್, ನಿರ್ದೇಶಕ ಯೋಗರಾಜ್ ಭಟ್, ಕಾಮಿಡಿ ಕಿಲಾಡಿಗಳು ನಿರ್ದೇಶಕ ಶರಣ್ ಆರೋಗ್ಯ ವಿಚಾರಸಿದ್ದಾರೆ. ಕಾಮಿಡಿ ಕಿಲಾಡಿಗಳು ಶೋ ಮೂಲಕ ಜನಪ್ರಿಯರಾದ ಬಳಿಕ ಕೆಲವು ಸಿನಿಮಾಗಳಲ್ಲೂ ನಟಿಸಿದ್ದರು.
ಇದರಲ್ಲಿ ಇನ್ನಷ್ಟು ಓದಿ :