ಬೆಂಗಳೂರು: ಕಿರುತೆರೆಯ ಖ್ಯಾತ ನಟಿ ರಂಜಿನಿ ರಾಘವನ್ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಶ್ ಸೀಸನ್ 10 ರಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಈ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.ನಾಳೆಯಿಂದ ಕಲರ್ಸ್ ವಾಹಿನಿಯಲ್ಲಿ ಬಿಗ್ ಬಾಸ್ ಶೋ ಆರಂಭವಾಗಲಿದೆ. ಎಂದಿನಂತೆ ಕಿಚ್ಚ ಸುದೀಪ್ ಶೋ ನಡೆಸಿಕೊಡುತ್ತಿದ್ದಾರೆ. ಈ ಶೋನಲ್ಲಿ ಭಾಗಿಯಾಗುವ ಸ್ಪರ್ಧಿಗಳ ಬಗ್ಗೆ ಈಗಾಗಲೇ ಊಹಾಪೋಹಗಳು ಹರಿದಾಡುತ್ತಿವೆ.ಈ ನಡುವೆ ಕನ್ನಡತಿ ಖ್ಯಾತಿಯ ರಂಜಿನಿ ರಾಘವನ್ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿತ್ತು.