ಕಿಚ್ಚ ಸುದೀಪ್ ಈಗಾಗಲೇ ಬಿಗ್ಬಾಸ್ ಮೂಲಕ ಕಿರುತೆರೆ ವೀಕ್ಷಕರ ಮನವನ್ನು ಗೆದ್ದಿದ್ದಾರೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಧಾರವಾಹಿಯೊಂದರ ನಿರ್ಮಾಪಕರೂ ಆಗಿದ್ದಾರೆ. ಕಿಚ್ಚ ಸುದೀಪ್ ನಿರ್ಮಾಣದ ವಾರಸ್ದಾರ ಇದೇ 19 ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿರಾತ್ರಿ 7.30 ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಇದು ಕಿರುತೆರೆ ಧಾರವಾಹಿಯೇ ಆದರೂ ಬಹುತೇಕ ಸಂಖ್ಯೆಯಲ್ಲಿ ಸಿನಿಮಾ ಕಲಾವಿದರು ಹಾಗೂ ತಂತ್ರಜ್ಞರು ಸುದೀಪ್ ಅವರ ಮೇಲಿನ ಅಭಿಮಾನದಿಂದ ಭಾಗವಹಿಸಿದ್ದಾರೆ.