ಬೆಂಗಳೂರು (ಜು.29): ರಾಜ್ಯದ ಗ್ರಾಮೀಣ ಭಾಗಗಳಲ್ಲಿ 6ರಿಂದ 18 ವರ್ಷದೊಳಗಿನ ಒಟ್ಟು 33,344 ಮತ್ತು ನಗರ ಪ್ರದೇಶಗಳಲ್ಲಿನ 8,718 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ, ಆದರೆ ಗ್ರಾಮೀಣ ಪ್ರದೇಶದ 3 ರಿಂದ 6 ವರ್ಷದೊಳಗೆ 1,26,245 ಮಕ್ಕಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕೋರ್ಟ್ ಸಹಾಯಕರಾಗಿರುವ (ಅಮಿಕಸ್ ಕ್ಯೂರಿ) ಹಿರಿಯ ವಕೀಲ ಕೆ.ಎನ್. ಫಣೀಂದ್ರ ವರದಿ ಸಲ್ಲಿಸಿದ್ದಾರೆ. ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ವಿಚಾರವಾಗಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ