ಬೆಂಗಳೂರು : ಕೊರೊನಾದಿಂದ ಬಿಪಿಎಲ್ ಕುಟುಂಬದ ದುಡಿಯುವ ಸದಸ್ಯ ಮೃತಪಟ್ಟರೆ 1 ಲಕ್ಷ ಪರಿಹಾರ ಎಂಬ ಸರ್ಕಾರದ ಆದೇಶದಲ್ಲಿ ಇದೀಗ ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಕುಟುಂಬದ ದುಡಿಯುವ ಸದಸ್ಯರಾಗಿದ್ದರೇ ಮಾತ್ರ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿತ್ತು. ಇದೀಗ ಹಿಂದಿನ ಆದೇಶ ಬದಲಾಯಿಸಿ ಹೊಸ ಆದೇಶ ಹೊರಡಿಸಿದೆ. ಬಿಪಿಎಲ್ ಕುಟುಂಬದ ಯಾವುದೇ ಸದಸ್ಯ ಕೊರೊನಾದಿಂದ ಮೃತರಾಗಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ಪರಿಹಾರ ಕೊಡುವುದಾಗಿ ಹೊಸ ಆದೇಶ ಪ್ರಕಟ ಮಾಡಿದೆ.