ಬೆಂಗಳೂರು (ಜು.15): ವಕೀಲರು, ಕಾನೂನು ವೃತ್ತಿಪರರ ಮೇಲೆ ದೌರ್ಜನ್ಯ ಎಸಗುವವರಿಗೆ ಜೈಲು ಶಿಕ್ಷೆ, ದಂಡ ವಿಧಿಸುವುದು ಸೇರಿದಂತೆ ಹಲವು ಅಂಶಗಳನ್ನು ಒಳಗೊಂಡಿರುವ ವಕೀಲರ ರಕ್ಷಣೆಗಾಗಿ ಸಿದ್ಧಪಡಿಸಿರುವ ‘ಕರ್ನಾಟಕ ವಕೀಲರ (ದೌರ್ಜನ್ಯ ತಡೆ ಮತ್ತು ರಕ್ಷಣೆ) ಮಸೂದೆ -2021’ ಅನ್ನು ಬೆಂಗಳೂರು ವಕೀಲರ ಸಂಘ (ಎಎಬಿ) ಬುಧವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಸಲ್ಲಿಸಿದೆ.ವಕೀಲರ ರಕ್ಷಣೆಗೆ ಕಾಯ್ದೆ ರೂಪಿಸುವಂತೆ ಕೋರಿ ಹೈಕೋರ್ಟ್ ಹಿರಿಯ ವಕೀಲರಾದ ಉದಯ್