ತಿರುವನಂತಪುರಂ : ಕೇರಳದಲ್ಲಿಂದು ಕೊರೋನಾಗೆ 121 ಸೋಂಕಿತರು ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25, 303ಕ್ಕೆ ಏರಿಕೆಯಾಗಿದೆ. ಶನಿವಾರ ಹೊಸದಾಗಿ 13, 217 ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 47,07,936ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 96,835 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಜ್ಯದಲ್ಲಿ ಸದ್ಯ 1,41,155 ಸಕ್ರಿಯ ಪ್ರಕರಣಳಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಮಧ್ಯೆ 14, 437 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು,