ಶ್ರೀನಗರ (ಆ.06): ಭಾರತದ ಗಡಿಯನ್ನು ಅಕ್ರಮವಾಗಿ ನುಸುಳಿ ವಿಧ್ವಂಸಕ ಕೃತ್ಯವೆಸಗಲು 140 ಭಯೋತ್ಪಾದಕರು ಜಮ್ಮು-ಕಾಶ್ಮೀರದ ಗಡಿಯಲ್ಲಿರುವ ಲಾಂಚ್ಪ್ಯಾಡ್ಗಳ ಬಳಿ ಕಾಯುತ್ತಿದ್ದಾರೆ ಎಂಬ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಜೊತೆಗೆ ಭಾರತ ಮತ್ತು ಪಾಕಿಸ್ತಾನ ದೇಶಗಳು ಕದನ ವಿರಾಮಕ್ಕೆ ಬದ್ಧರಾಗಿರಲು ಒಪ್ಪಿದ ಹೊರತಾಗಿಯೂ, ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ ಎಂದು ಹಿರಿಯ ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಗುರುವಾರ ಮಾತನಾಡಿದ ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು,