ಮುಂಬೈ : ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸರ್ಕಾರ ರಕ್ಷಿಸುವ ನಿಟ್ಟಿನಲ್ಲಿ ಶಿವಸೇನೆಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದ್ದು,ಸಭೆಯಲ್ಲಿ ಮುಂದಿನ ಕ್ರಮದ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಥಾಣೆ, ಮುಂಬೈನಲ್ಲಿ ಸಿಆರ್ಪಿಸಿ ಸೆಕ್ಷನ್ 144 ಜಾರಿಯಾಗಿದೆ.ಜೂನ್ 30ರ ವರೆಗೂ 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಮೆರವಣಿಗೆ, ಘೋಷಣಾ ವಾಕ್ಯಗಳು ಕೂಗುವುದು, ಜನರು ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ