ಶಿವಮೊಗ್ಗ : ಅನ್ಯಕೋಮಿನ ಗುಂಪೊಂದು ಯುವಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ನಡೆದಿದೆ.ಕೊಲೆಯಾದ ಯುವಕನನ್ನು ಹರ್ಷ ಎಂದು ಗುರುತಿಸಲಾಗಿದೆ. ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್