ಔರಂಗಾಬಾದ್ ಸೆ 29 : ಗುಲಾಬ್ ಚಂಡಮಾರುತದ ಪ್ರಭಾವದಿಂದ ಮಹಾರಾಷ್ಟ್ರದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಎರಡು ದಿನಗಳ ಅವಧಿಯಲ್ಲಿ ಸುಮಾರು ಹದಿನೇಳು ಮಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಮಧ್ಯ ಮಹಾರಾಷ್ಟ್ರ, ಮರಾಠವಾಡ ಪ್ರದೇಶ, ವಿದರ್ಭಾ, ಕೊಂಕಣ ಇತರೆ ಪ್ರದೇಶಗಳಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ಸುಮಾರು ಹದಿನೇಳು ಮಂದಿ ಸಾವನ್ನಪ್ಪಿದ್ದಾರೆ. ಹಲವು ಜಾನುವಾರುಗಳು ಕೂಡ ಸಾವನ್ನಪ್ಪಿವೆ. ಮನೆಗಳು ಕುಸಿದ