ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಕೊನೆಯ ಹಂತದಲ್ಲಿರುವ ಪ್ರಕರಣಗಳಿಗೆ ಕೂಡಲೇ ಪರಿಹಾರ ಪಾವತಿಸಲು, ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ 2500 ಕೋಟಿ ರೂ. ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆಲಮಟ್ಟಿ ಹಿನ್ನೀರಿನಿಂದ ಮುಳುಗಡೆಯಾಗುವ 20 ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಕೃಷ್ಣ ಭಾಗ್ಯ ಜಲ ನಿಗಮ