ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಇಂದಿನಿಂದ ಮಂಗಳವಾರದವರೆಗೆ ಕರಾವಳಿಯ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಇಂದಿನಿಂದ 3 ದಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಮಳೆ ಹೆಚ್ಚಾಗುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ