ಬೆಂಗಳೂರು : ಕರ್ನಾಟಕದಲ್ಲಿ ಓಮಿಕ್ರಾನ್ ಸೋಂಕಿತ ಬಿಡುಗಡೆ ಆಗುವ ಹೊತ್ತಿನಲ್ಲೇ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.ಇಂದು ಮತ್ತೊಂದು ಓಮಿಕ್ರಾನ್ ಸೋಂಕು ಪ್ರಕರಣ ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3ಕ್ಕೇರಿದೆ. ಡಿ.1ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ 34 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಓಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ. ಈತ ಬೊಮ್ಮನಹಳ್ಳಿಯ ಅಂಜನಾಪುರ ನಿವಾಸಿಯಾಗಿದ್ದಾನೆ.ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಈತನಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬಂದಿತ್ತು. ನಂತರ ಐಸೊಲೇಷನ್ನಲ್ಲಿದ್ದ