ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 24) ಹೊಸದಾಗಿ 388 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,85,986 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,39,239 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,007 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,711 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.