ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿಗಳನ್ನು ಇದೀಗ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ. ಬಹು ನಿರೀಕ್ಷಿತ ಘೋಷಣೆಗಳು ಇವಾಗಿದ್ದು, ಇದರಿಂದ ಸರ್ಕಾರಕ್ಕೆ ಎಷ್ಟು ಹೊರೆಯಾಗಬಹುದು ಎಂಬುದು ಎಲ್ಲರಿಗೂ ಮೂಡಿರುವ ಪ್ರಶ್ನೆ. ಸಿದ್ದರಾಮಯ್ಯ ಸರ್ಕಾರ ಘೋಷಣೆ ಮಾಡಿರುವ 5 ಗ್ಯಾರಂಟಿ ಯೋಜನೆ ಜಾರಿಗೆ ವರ್ಷಕ್ಕೆ 50-55 ಸಾವಿರ ಕೋಟಿ ರೂ. ಹೊರೆಯಾಗಬಹುದು ಎಂದು ಅಂದಾಜಿಸಲಾಗಿದೆ.ಗೃಹಜ್ಯೋತಿಕಾಂಗ್ರೆಸ್ ಘೋಷಿಸಿರುವ ಮೊದಲ ಗ್ಯಾರಂಟಿ ಗೃಹಜ್ಯೋತಿ ಯೋಜನೆಯಾಗಿದ್ದು,