ಮಂಗೋಲಾ : ಡೆಮೊಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ದೋಣಿ ಮುಗುಚಿ 50ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, 60 ಮಂದಿ ನಾಪತ್ತೆಯಾಗಿದ್ದಾರೆ. ಈ ಘಟನೆ ಕಾಂಗೋ ನದಿಯಲ್ಲಿ ನಡೆದಿದ್ದು, ಇದುವರೆಗೂ 51 ಶವಗಳನ್ನು ಹೊರಗೆ ತೆಗೆಯಲಾಗಿದೆ. ಸ್ಥಳೀಯರು ಮತ್ತು ಪ್ರಯಾಣಿಕರ ಮಾಹಿತಿ ಮೇರೆಗೆ ಇನ್ನೂ 60 ಜನ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. 39 ಜನರು ಸುರಕ್ಷಿತವಾಗಿದ್ದು, ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಪ್ರಯಾಣಿಕರನ್ನು ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸಲಾಗಿದೆ