ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.