ನವದೆಹಲಿ(ಆ.08): ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ದೇಶ, ಶನಿವಾರ ಮತ್ತೊಂದು ಆಶಾದಾಯಕ ಬೆಳವಣಿಗೆ ಕಂಡಿದೆ. ಶೇ.85ರಷ್ಟುಪರಿಣಾಮಕಾರಿ ಎಂದು ಸಾಬೀತಾಗಿರುವ ಅಮೆರಿಕದ ಜಾನ್ಸನ್ ಆ್ಯಂಡ್ ಜಾನ್ಸನ್ ಸಿಂಗಲ್ ಡೋಸ್ ಲಸಿಕೆಯ ತುರ್ತುಬಳಕೆಗೆ ಶನಿವಾರ ಭಾರತ ಅನುಮೋದನೆ ನೀಡಿದೆ. ಇದರಿಂದಾಗಿ ದೇಶಕ್ಕೆ 5ನೇ ಲಸಿಕೆ ಪ್ರವೇಶಿಸಿದಂತಾಗಿದೆ. ಶುಕ್ರವಾರ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿ, ಭಾರತದ ಔಷಧ ನಿಯಂತ್ರಣ ಸಂಸ್ಥೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಈ ಕೋರಿಕೆಗೆ ಅದೇ ದಿನ ಆನುಮೋದನೆ ದೊರಕಿದೆ.