ನವದೆಹಲಿ: ಭಾರತದಲ್ಲಿ ಮೇಡನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ 4 ಕೆಮ್ಮು ಹಾಗೂ ಶೀತದ ಸಿರಪ್ಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಎಚ್ಚರಿಕೆ ನೀಡಿದೆ.ಈ ಸಿರಪ್ಗಳು ಆಫ್ರಿಕಾ ಖಂಡದ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಸಂಬಂಧಪಟ್ಟಿವೆ ಎಂದು ತಿಳಿಸಿದೆ.ಈ ಸಿರಪ್ಗಳ ಮಾದರಿಗಳನ್ನು ಸಂಗ್ರಹಿಸಿ ಈಗಾಗಲೇ ಪ್ರಯೋಗಾಲಯಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿದೆ. ಅವುಗಳ ವಿಶ್ಲೇಷಣೆಯಲ್ಲಿ ಹಾನಿಕಾರಕ ಅಂಶಗಳು ಒಳಗೊಂಡಿರುವುದು ಕಂಡುಬಂದಿರುವುದಾಗಿ ತಿಳಿಸಿದೆ.4 ಉತ್ಪನ್ನಗಳ ಮಾದರಿಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದಾಗ ಅವು ಸ್ವೀಕಾರಾರ್ಹವಲ್ಲದ ಪ್ರಮಾಣದಲ್ಲಿ ಡೈಥಿಲೀನ್