ಮೈಸೂರು : 8ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡುತ್ತಿದ್ದು, ಮೋದಿಯವರು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮಗಳ ಪಟ್ಟಿಯನ್ನು ಈ ಹಿಂದೆ ಬಿಡುಗಡೆಗೊಳಿಸಲಾಗಿತ್ತು. ಇದೀಗ ಈ ಕಾರ್ಯಕ್ರಮದ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.ಜೂನ್ 20 ಮತ್ತು 21ರಂದು ಎರಡು ದಿನ ಮೋದಿ ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜೂ. 20ರಂದು ಮಧ್ಯಾಹ್ನ 11.55ಕ್ಕೆ ಬೆಂಗಳೂರು ಯಲಹಂಕ ವಾಯುನೆಲೆಗೆ ಆಗಮಿಸಿ ನಂತರ