ಬೆಂಗಳೂರು : ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯುನಿಟ್ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್ ಯೋಜನೆಯನ್ನು ರದ್ದುಪಡಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಗಸ್ಟ್ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು ಭಾಗಶ: ಪರಿಷ್ಕರಿಸಿದ್ದರಿಂದ ಸುತ್ತೋಲೆಯನ್ನು ಸೆಪ್ಟೆಂಬರ್ 3, 2022 ರಂದು ಹಿಂಪಡೆಯಲಾಗಿದೆಯೇ ಹೊರತು, ಯೋಜನೆಯನ್ನು ರದ್ದುಪಡಿಸಿಲ್ಲ