ನವದೆಹಲಿ : 24 ವರ್ಷದ ಬಳಿಕ ಗಾಂಧಿಯೇತರ ವ್ಯಕ್ತಿ ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಸಾರಥಿಯಾಗಿದ್ದಾರೆ.ರಾಜ್ಯಸಭೆಯ ಪ್ರತಿಪಕ್ಷದ ನಾಯಕನಾಗಿದ್ದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಹೊಸ ಅಧ್ಯಕ್ಷರ ಆಯ್ಕೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ನೂತನ ಸಾರಥಿಯಾಗಿದ್ದಾರೆ.ಎಐಸಿಸಿ ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ 7,897