ಬೆಂಗಳೂರು : ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರೈ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಗಲ್ಫ್ ನ ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಭಾಗಿಯಾಗಿದ್ದ ಪ್ರಕಾಶ್ ರೈ ಅವರು ಶಬರಿ ಮಲೆ ದೇಗುಲದ ವಿವಾದ ಬಗ್ಗೆ ಮಾತನಾಡಿ, ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು ಹೆಣ್ಣಿಗೆ ಹೋಲಿಸುತ್ತೇವೆ. ಅದೇ ಹೆಣ್ಣಿನಿಂದ ಎಲ್ಲರೂ ಜನ್ಮ ತಾಳುತ್ತೇವೆ. ಆದರೆ ಅದೇ ಹೆಣ್ಣನ್ನು ಪೂಜೆಯಿಂದ ಹೊರಗಿಡೋದು ಎಷ್ಟು ಸರಿ ಅದರ ಅರ್ಥವೇನು?