ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು ಅಮೆರಿಕಾಗೆ ಗಡಿಪಾರು ಮಾಡುವಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಿಂದ ಎಡಿಜಿಪಿ ಪ್ರತಾಪ್ ರೆಡ್ಡಿ ಮೂಲಕ ಗೃಹಮಂತ್ರಿ ಕಛೇರಿಯ ಮುಖ್ಯ ಕಾರ್ಯದರ್ಶಿಗೆ ಶಿಫಾರಸ್ಸು ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ.ಸಮುದಾಯ ಒಂದರ ಅವಹೇಳನಕ್ಕೆ ಸಂಬಂಧಿಸಿದಂತೆ ಚೇತನ್ ಮೇಲೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಪೊಲೀಸ್ ಇಲಾಖೆ, ಚೇತನ್ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ. ಹಾಗಾಗಿ ಅವರನ್ನು ಅಮೆರಿಕಾಗೆ ಗಡಿಪಾರು