ಬೆಂಗಳೂರು : ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ವಿ ನಾಗರಾಜು ಅವರ ಪರವಾಗಿ ರೋಡ್ ಶೋ ಮಾಡುವ ಮೂಲಕ ಮತಯಾಚನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ನಟ ಯಶ್, ನೆಲಮಂಗಲ ತಾಲೂಕಿನಲ್ಲಿರುವ 56 ಕೆರೆಗಳನ್ನು ಹೂಳೆತ್ತಿ ಅಭಿವೃದ್ಧಿ ಮಾಡಿ ಮತ್ತೆ ಕೆರೆಗಳನ್ನು ತುಂಬಿಸುತ್ತೇನೆ ಎಂಬ ಉತ್ಸಾಹದಲ್ಲಿ ಮಾಜಿ ಶಾಸಕ ನಾಗರಾಜು ಅವರಿದ್ದಾರೆ. ಹೀಗಾಗಿ ನಾನು ನಾಗರಾಜ್ ಪರ ಮತಯಾಚನೆ