"ಭಾರತ್ ನೆಟ್ಗೆ ಕರ್ನಾಟಕ ಸೇರ್ಪಡೆ ಮಾಡಿ': ಬೊಮ್ಮಾಯಿ ಕೇಂದ್ರ ಸರಕಾರಕ್ಕೆ ಮನವಿ

ಬೆಂಗಳೂರು| Ramya kosira| Last Modified ಬುಧವಾರ, 8 ಸೆಪ್ಟಂಬರ್ 2021 (13:24 IST)
ಬೆಂಗಳೂರು : ಗ್ರಾಮೀಣ ಪ್ರದೇಶಕ್ಕೆ ಅಂತರ್ಜಾಲ ಸೌಲಭ್ಯ ಕಲ್ಪಿಸುವ ದೇಶದ ಮಹತ್ವದ ಭಾರತ್ ನೆಟ್ ಯೋಜನೆಗೆ ಕರ್ನಾಟಕ ರಾಜ್ಯವನ್ನು ಸೇರ್ಪಡೆ ಮಾಡುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರಕ್ಕೆ ಮನವಿ ಮಾಡಿದರು.
ಮಂಗಳವಾರ ದಿಲ್ಲಿಯಲ್ಲಿ ಕೇಂದ್ರ ರೈಲ್ವೇ ಮತ್ತು ದೂರಸಂಪರ್ಕ ಖಾತೆಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಅನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.> ಈ ಭೇಟಿ ವೇಳೆ ಹಲವಾರು ವಿಷಯಗಳನ್ನು ಚರ್ಚಿಸಲಾಗಿದೆ. ಕರ್ನಾಟಕ ರಾಜ್ಯ ಆಪ್ಟಿಕಲ್ ಫೈಬರ್ ನೆಟ್ವರ್ಕಿಂಗ್ ಬಹಳ ಸೀಮಿತವಾಗಿದ್ದು, ಭಾರತ್ ನೆಟ್ಗೆ ಕರ್ನಾಟಕವನ್ನು ಸೇರ್ಪಡೆ ಮಾಡಬೇಕು. 4,300 ಕೋ. ರೂ.ಗಳಲ್ಲಿ ರಾಜ್ಯದಲ್ಲಿ ಸಂಪೂರ್ಣ ನೆಟ್ ವರ್ಕಿಂಗ್ ಸಾಧ್ಯವಾಗು ತ್ತದೆ. ಇದರಿಂದ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಆಡಳಿತ, ವ್ಯಾಪಾರ ವಹಿವಾಟು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗ ಲಿದೆ ಎಂದು ಮನವಿ ಮಾಡಿದ್ದೇನೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅನುದಾನದ ಲಭ್ಯತೆ ಆಧಾರದಲ್ಲಿ ಯೋಜನೆ ಜಾರಿ ಮಾಡುವುದಾಗಿ ಭರವಸೆ ನೀಡಿರುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.> ರೈಲ್ವೇ ಯೋಜನೆಗಳಿಗೆ ಆದ್ಯತೆ : ಕರ್ನಾಟಕದಲ್ಲಿ ರೈಲ್ವೇ ಅಭಿವೃದ್ಧಿ ಯೋಜನೆಗಳು, ಅದರಲ್ಲೂ ಪ್ರಮುಖವಾಗಿ ಈಗಾಗಲೇ ಪ್ರಾರಂಭ ಮಾಡಿರುವ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯ ಗತಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ವಿಶೇಷವಾಗಿ ಕಲಬುರಗಿಯಲ್ಲಿ ರೈಲ್ವೇ ಡಿವಿಜನ್ ಸ್ಥಾಪಿಸುವ ಬೇಡಿಕೆ ಇದೆ. ಹುಬ್ಬಳ್ಳಿ-ಅಂಕೋಲಾ ರೈಲ್ವೇ ಮಾರ್ಗ ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದೆ. ಪ್ರಕರಣ ಹೈಕೋರ್ಟಿನಲ್ಲಿದೆ. ಆದಷ್ಟು ಬೇಗ ಆ ತಡೆಯಾಜ್ಞೆ ತೆರವುಗೊಳಿಸಲು ಪ್ರಯತ್ನಿಸಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಬೊಮ್ಮಾಯಿ ಅವರು ಹೇಳಿದರು.
 ಇದರಲ್ಲಿ ಇನ್ನಷ್ಟು ಓದಿ :