ನವದೆಹಲಿ : ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕಳುಹಿಸಿರುವ ಆದಿತ್ಯ ಎಲ್1 ಬಾಹ್ಯಾಕಾಶ ನೌಕೆ ಎರಡನೇ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ ಎಂದು ಇಸ್ರೋ ತಿಳಿಸಿದೆ. ಸೆ.5 ರಂದು ಮಧ್ಯರಾತ್ರಿ 2:45 ಕ್ಕೆ ಆದಿತ್ಯ ಎಲ್1 ನೌಕೆ ಎರಡನೇ ಕಕ್ಷೆಯನ್ನು ಪ್ರವೇಶಿಸಿದೆ ಎಂದು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಇಸ್ರೋ ಮಾಹಿತಿ ಹಂಚಿಕೊಂಡಿದೆ.ಆದಿತ್ಯ ಎಲ್1 ನೌಕೆಯು ಸೆ.10 ರಂದು ರಾತ್ರಿ 2:30 ಕ್ಕೆ ಮೂರನೇ ಕಕ್ಷೆಯನ್ನು ಪ್ರವೇಶಿಸಲಿದೆ