ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ.