ಬೆಂಗಳೂರು(ಅ.05) : ರಾಜ್ಯದಲ್ಲಿ ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವದಿಂದಾಗಿ ಕೊಂಚ ಬಿಡುವ ಪಡೆದಿದ್ದ ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಗಾರು ಕಡಿಮೆ ಒತ್ತಡದ ಪ್ರದೇಶದಿಂದ ಪೂರ್ವ ಜಾರ್ಖಂಡ್ನಾದ್ಯಂತ ಉತ್ತರ ಒರಿಸ್ಸಾದವರೆಗೆ ವಿಸ್ತರಿಸಿದ್ದು, ಅಕ್ಟೋಬರ್ 6 ರಿಂದ ಮುಂಗಾರು ಕೊನೆಯಾಗಲು ಪರಿಸ್ಥಿತಿಗಳು ಅನುಕೂಲಕರವಾಗುತ್ತಿವೆ. ಆದರೆ ಇಂದು ಮತ್ತು ನಾಳೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು