ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಂಬರೀಶ್, ಚುನಾವಣೆ ಸ್ಪರ್ಧೆ ಬಗ್ಗೆ ಇಂದು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಈ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯರನ್ನು ತಮ್ಮ ನಿವಾಸಕ್ಕೆ ಇಂದು ರಾತ್ರಿ ಊಟಕ್ಕೆ ಕರೆದಿರುವ ಅಂಬಿ ಮಂಡ್ಯ ಜಿಲ್ಲೆಯ ಕೆಲ ಕ್ಷೇತ್ರಗಳ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಿಎಂ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಮೇಲುಕೋಟೆ ಕ್ಷೇತ್ರದಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಕಾಂಗ್ರೆಸ್ ಬೆಂಬಲ ಕೊಟ್ಟಿರುವುದಕ್ಕೆ ಅಂಬಿ ಆಕ್ರೋಶ