ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ ನ ಕೆಲವು ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಲು ಯತ್ನಿಸುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಖಡಕ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.ವಿಪಕ್ಷ ಬಿಜೆಪಿ ಆಡಳಿತಾರೂಢ ಪಕ್ಷದ ಕೆಲವು ಶಾಸಕರನ್ನು ತನ್ನತ್ತ ಸೆಳೆದು ಸರ್ಕಾರ ಉರುಳಿಸಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿವೆ. ಅಷ್ಟೇ ಅಲ್ಲ, ಬೆಳಗಾವಿ ಕಾಂಗ್ರೆಸ್ ನಲ್ಲಿ ಉಂಟಾಗಿರುವ ಭಿನ್ನಮತದ ಹಿಂದೆಯೂ ಬಿಜೆಪಿ ಕೈವಾಡವಿದೆ