ಬೆಳಗಾವಿ : ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅವಕಾಶ ನೀಡಿ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಬೆಳಗಾವಿ ವಿಜಯ್ ಪ್ಯಾರಾ ಮೆಡಿಕಲ್ ಕಾಲೇಜಿಗೆ ಮುಂದಿನ ಆದೇಶದವರೆಗೆ ಅನಿರ್ದಿಷ್ಟಾವಧಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ವಿಜಯ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಪಾಟೀಲ್ ತಿಳಿಸಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ವೈಯಕ್ತಿಕವಾಗಿ ಮನವೊಲಿಕೆ ಮಾಡಲಾಗುತ್ತಿತ್ತು. ವಿದ್ಯಾರ್ಥಿಗಳ ಜೊತೆಗೆ ಒನ್ ಟು ಒನ್ ಮಾತುಕತೆ ಮಾಡಲಾಗಿದೆ