ಬೆಂಗಳೂರು : ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಬುಧವಾರದವರೆಗೂ ಮಳೆ ಜೋರಾಗಿರಲಿದೆ. ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಮತ್ತು ಕರಾವಳಿ ಪ್ರದೇಶದ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ನವೆಂಬರ್ 30ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಆಂಧ್ರಪ್ರದೇಶದಲ್ಲೂ ವಿಪರೀತ ಮಳೆಯಾಗುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಅಬ್ಬರಿಸಲಿದೆ. ಶ್ರೀಲಂಕಾ ಕರಾವಳಿಯ ನೈಋತ್ಯ