ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಮೇಲೆ ದಂಡ ಕಟ್ಟಿಸಿಕೊಳ್ಳುವ ಪೊಲೀಸರು ಹಾಗೂ ಸವಾರರ ನಡುವೆ ವಾಗ್ಯುದ್ದಗಳೇ ನಡೆದು ಹೋಗಿವೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿದರು ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳಿ ತಪ್ಪಿಸಿಕೊಳ್ಳಲು ಆಗುವುದೇ ಇಲ್ಲ. ಬೆಂಗಳೂರು ನಗರ ಸಂಚಾರಿ ಪೊಲೀಸ್ ವಿಭಾಗ ಈಗ ಸ್ಮಾರ್ಟ್ ಆಗುವತ್ತ ಹೆಜ್ಜೆ ಇಟ್ಟಿದೆ. ಸಂಚಾರ ನಿಯಮ ಉಲ್ಲಂಘನೆಗಳ ದಂಡ ಪಾವತಿಗೆ ಎಂದು ಪೇಟಿಎಂ ಮೂಲಕ ಅವಕಾಶ ಕಲ್ಪಿಸಲಾಗಿದೆ.ಸೋಮವಾರ (ಜುಲೈ 5)