ಬೆಂಗಳೂರು: ಸಿಎಂ ಕುಮಾರಸ್ವಾಮಿ ತಾವು ಸ್ಪರ್ಧಿಸಿದ್ದ ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು ಆ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.ಇಂದು ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಲಿರುವ ಕುಮಾರಸ್ವಾಮಿ ಬಳಿಕ ಅನಿತಾ ಸ್ಪರ್ಧೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.ಈ ಮೊದಲು ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸುವ ಬಗ್ಗೆಯೂ ಎಚ್ ಡಿಕೆ ಚಿಂತನೆ ನಡೆಸಿದ್ದರು. ಆದರೆ ನಿಖಿಲ್ ಈಗಲೇ ರಾಜಕೀಯ ಪ್ರವೇಶ