ಹಾಸನ : ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಒಂದರಿಂದ ಹತ್ತನೇ ತರಗತಿವರೆಗೆ ಹಾಸನ ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಹಾಸನ ಡಿಡಿಪಿಐ ಪ್ರಕಾಶ್ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಬೇಸಿಗೆ ರಜೆ ಮುಗಿದು ಎರಡು ದಿನಗಳ ಹಿಂದೆಯಷ್ಟೇ ಶಾಲೆಗಳು ಆರಂಭವಾಗಿದ್ದವು.ಆದರೆ ಮಂಗಳವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಮಕ್ಕಳು ಶಾಲೆಗಳಿಗೆ ಬರಲು ಸಮಸ್ಯೆಯಾಗುತ್ತೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ದಿನದ