ಬೆಂಗಳೂರು : ಇಂಜಿನಿಯರಿಂಗ್ ಕಾಲೇಜುಗಳಲ್ಲೂ ಬಿಎಸ್ಸಿ ಪದವಿ ಕೋರ್ಸ್ ಗಳನ್ನು ಆರಂಭಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕ್ರಮಕೈಗೊಂಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಬಿಎಸ್ಸಿ ಪದವಿಗೆ ಪ್ರವೇಶ ನೀಡಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯ ಅನ್ವಯ ನಾಲ್ಕು ವರ್ಷದ ಬಿಎಸ್ಸಿ ಕೋರ್ಸ್ ಗಳನ್ನು ಆರಂಭಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತೀರ್ಮಾನಿಸಿದೆ. ಆರಂಭಿಕ ಹಂತದಲ್ಲಿ ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಮಾನ್ಯತೆ ಪಡೆದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಬಿಎಸ್ಸಿ ಕೋರ್ಸ್ ಗಳನ್ನು ಆರಂಭಿಸಲಿದ್ದು,