ಜಗತ್ತು ಡೆಲ್ಟಾ ಹಾಗೂ ಒಮಿಕ್ರೋನ್ ಕೋವಿಡ್ ತಳಿಗಳ ಹಾವಳಿಯಿಂದ ತತ್ತರಿಸುತ್ತಿರುವಾಗಲೇ ಕೊರೋನಾ ವೈರಸ್ನ ಮತ್ತೊಂದು ರೂಪಾಂತರಿ ತಳಿ ‘ಡೆಲ್ಟಾಕ್ರೋನ್’ ಪತ್ತೆಯಾಗಿದೆ.ಯುರೋಪ್ ಖಂಡದ ದ್ವೀಪ ದೇಶ ಸೈಪ್ರಸ್ ವಿಜ್ಞಾನಿಗಳು ಈ ಹೊಸ ತಳಿ ಪತ್ತೆ ಹಚ್ಚಿದ್ದಾರೆ. ಈ ವೈರಸ್ನಲ್ಲಿ ಡೆಲ್ಟಾಮತ್ತು ಒಮಿಕ್ರೋನ್ ಎರಡೂ ತಳಿಗಳ ಕೆಲ ಗುಣಗಳಿವೆ. ಸೈಪ್ರಸ್ನಲ್ಲಿ ಕೋವಿಡ್ ದೃಢಪಟ್ಟ 25 ರೋಗಿಗಳ ಜೀನೋಮಿಕ್ ಸೀಕ್ವೆನ್ಸಿಂಗ್ ನಡೆಸಿದಾಗ ಅವರ ಪೈಕಿ ಕೆಲವರಲ್ಲಿ ಡೆಲ್ಟಾಮತ್ತು ಒಮಿಕ್ರೋನ್ ರೂಪಾಂತರಿ ತಳಿಗಳ ಒಂದಷ್ಟು ಗುಣಗಳ