ಲಖ್ನೋ: ಡೆಂಗ್ಯೂ ಜ್ವರದಿಂದ ಫಿರೋಜಾಬಾದ್ನಲ್ಲಿ 30 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 44 ಕ್ಕೆ ಏರಿದ್ದು, ಸಿಎಂ ಯೋಗಿ ಆದಿತ್ಯನಾಥ್ ತನಿಖೆಗೆ ಆದೇಶಿಸಿದ್ದಾರೆ. ಉತ್ತರ ಪ್ರದೇಶದ ಫಿರೋಜಾಬಾದ್ ಪ್ರದೇಶದಲ್ಲಿ 44 ಜನ ಡೆಂಗ್ಯೂವಿನಿಂದ ಸಾವನ್ನಪ್ಪಿದ್ದು, ಮೃತರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದಾರೆ. ಡೆಂಘೀ ಸಾಂಕ್ರಾಮಿಕದ ಪರಿಣಾಮವಾಗಿ ಸಾವುಗಳು ಸಂಭವಿಸಿವೆ ಎಂದು ಶಂಕಿಸಲಾಗಿದೆ, ಯೋಗಿ ಆದಿತ್ಯನಾಥ್ ಸರ್ಕಾರ ತನಿಖೆಗೆ ಮುಂದಾಗಿದೆ. 12 ದಿನಗಳ ಅವಧಿಯಲ್ಲಿ ಸಾವು ಏರಿಕೆಯಾಗಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ