ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾವೇರಿ ಜಲ ನಿರ್ವಹಣೆ ಪ್ರಾಧಿಕಾರದ ಮುಂದೆ ರಾಜ್ಯದ ವಾದ ಮಂಡಿಸಿದ್ದು, ಮುಂದಿನ ವಾರ ನಡೆಯುವ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ವಿಸ್ತೃತ ಯೋಜನಾ ವರದಿಗೆ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ನಗರದ ಜಿಎಂಐಟಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸುಪ್ರೀಂಕೋರ್ಟ್ನಲ್ಲಿ ಯಾವುದೇ ತಡೆಯಾಜ್ಞೆಯೂ ಇಲ್ಲ.ಈ ವಿಚಾರದಲ್ಲಿ ನೆರೆಯ ತಮಿಳನಾಡಿನ ಎಲ್ಲಾ ಹೇಳಿಕೆಗಳಿಗೆ ನಾವು ಪದೇಪದೇ ಉತ್ತರ ಕೊಡಬೇಕಾದ