ಮೈಸೂರು : ಆಷಾಢ ಮಾಸ ಹಿನ್ನೆಲೆಯಲ್ಲಿ 2ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವದಿಸಲು ಬರುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಕೂಡ ಇದೆ.ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಅಲ್ಲದೇ