ನವದೆಹಲಿ: ರಾಜಕೀಯ ರಂಗದ ಧೀಮಂತ, ಅಜಾತ ಶತ್ರು ಎಂದೇ ಕರೆಯಿಸಿಕೊಂಡಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನು ನೆನಪು ಮಾತ್ರ. ಬಿಜೆಪಿಯಿಂದ ಪ್ರಧಾನಿಯಾಗಿ ಮೊದಲ ಬಾರಿಗೆ ಪೂರ್ಣಾವಧಿ ಅಧಿಕಾರ ಪೂರ್ತಿಗೊಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದ ಮಾತಿನ ಮಲ್ಲ, ಚಾಣಕ್ಷ್ಯ ರಾಜಕಾರಣಿ ಅನಾರೋಗ್ಯದ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಾಜಪೇಯಿ ಆರೋಗ್ಯ ಸ್ಥಿತಿ ಕಳೆದೆರಡು