ನವದೆಹಲಿ: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಂತಿಮ ಸಂಸ್ಕಾರ ಕಾರ್ಯಗಳು ಪೂರ್ಣಗೊಂಡಿವೆ. ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಮಾರಕದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ವಾಜಪೇಯಿ ಅವರ ಅಂತ್ಯ ಸಂಸ್ಕಾರ ನೆರವೇರಿದೆ. ದತ್ತು ಪುತ್ರಿ ನಮಿತಾ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.ಇದಕ್ಕೂ ಮೊದಲು ದೇಶ-ವಿದೇಶದ ಗಣ್ಯರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು. ಭೂತಾನ್ ದೊರೆ ಜಿಗ್ಮೆ ಕೇಸರ್, ಅಫ್ಘಾನಿಸ್ತಾನ ಮಾಜಿ ಅಧ್ಯಕ್ಷ ಹಮೀದ್ ಕರ್ಜಾಯಿ, ಪ್ರಧಾನಿ ಮೋದಿ,