ಬೆಂಗಳೂರು : ನಗರದಲ್ಲಿ ಅಕ್ರಮ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಪಟ್ಟು ಹಿಡಿದಿರುವ ಆಟೋ ಚಾಲಕರು ಮತ್ತು ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದಾರೆ. ಸೋಮವಾರ ಮಧ್ಯರಾತ್ರಿಯವರೆಗೆ ಬೆಂಗಳೂರಿನಲ್ಲಿ ಆಟೋರಿಕ್ಷಾ ಬಂದ್ ನಡೆಸಲು ನಿರ್ಧರಿಸಿದ್ದಾರೆ. ಸುಮಾರು 2 ಲಕ್ಷಕ್ಕೂ ಅಧಿಕ ಆಟೋಗಳು ಬಂದ್ಗೆ ಬೆಂಬಲ ನೀಡಿವೆ. ಆಟೋ ಸೇವೆ ಬಂದ್ನಿಂದಾಗಿ ಪ್ರಯಾಣಿಕರು ನಗರದಲ್ಲಿ ಸಂಚರಿಸಲು ಬಿಎಂಟಿಸಿ ಬಸ್, ಮೆಟ್ರೋ, ಖಾಸಗಿ ವಾಹನ, ಟ್ಯಾಕ್ಸಿ ಹಾಗೂ ಓಲಾ,