ಬೆಳಗಾವಿ : ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆ ಹುಕ್ಕೇರಿಯ ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದ ಮನೆಯಲ್ಲಿ ಸಂಜೆ ನೆರವೇರಿತು.ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಧಾರ್ಮಿಕ ಪದ್ಧತಿಯಂತೆ ಅಂತಿಮ ವಿಧಿ ವಿಧಾನ ನೆರವೇರಿತು.ವೀರಶೈವ ಲಿಂಗಾಯತ ಪದ್ಧತೆಯಂತೆ ಅಂತಿಮ ವಿಧಿವಿಧಾನವನ್ನು ಬೆಲ್ಲದ ಬಾಗೇವಾಡಿ ಗ್ರಾಮದ ಮಹಾಂತ ವಿರಕ್ತ ಮಠದ ಶಿವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಉಮೇಶ್ ಕತ್ತಿಯವರನ್ನು ಸಮಾಧಿ ಮಾಡಲಾಯಿತು.