ಸಚಿವ ಎಂ.ಬಿ.ಪಾಟೀಲ್ ಒಬ್ಬ ಮೋಸಗಾರ ಮಾತ್ರವಲ್ಲದೆ ಬಂಜಾರಾ ಸಮಾಜವನ್ನ ವ್ಯವಸ್ಥಿತವಾಗಿ ತುಳಿಯುತ್ತಿದ್ದಾರೆ ಎಂದು ಬಂಜಾರಾ ಕ್ರಾಂತಿ ದಳದ ಅಧ್ಯಕ್ಷ ಶಂಕರ ಚವ್ಹಾಣ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಏಕವಚನದಲ್ಲಿ ತೀವ್ರ ವಾಗ್ದಾಳಿ ನಡೆಸಿದರು. ಸಚಿವ ಎಂ.ಬಿ.ಪಾಟೀಲ್ ಹೊಂದಾಣಿಕೆ ರಾಜಕೀಯ ಮಾಡುತ್ತಾ ಕಾಂಗ್ರೆಸ್ ಮಾತ್ರವಲ್ಲದೇ ಇನ್ನಿತರ ಪ್ರಮುಖ ಪಕ್ಷಗಳಲ್ಲಿಯೂ ನಾನೇ ಸುಪ್ರೀಂ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದರು. ಬಂಜಾರ ಸಮಾಜದವರ ಮತ ಪಡೆದು, ಬಳಸಿಕೊಂಡು ಗೆದ್ದು