ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದೆ.ಉಡುಪಿ, ಉತ್ತರ